ನವದೆಹಲಿ: ಕೇಂದ್ರ ಸರ್ಕಾರದ ಕೃಷಿ, ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮಾರ್ ಅವರು ಕರ್ನಾಟಕದಲ್ಲಿ ಮಲೆನಾಡ ಭಾಗದಲ್ಲಿ ಕಾಣಿಸಿಕೊಂಡ ಎಲೆ ಚುಕ್ಕೆ ರೋಗದ (YLD) ಅಧ್ಯಯನ ಮತ್ತು ಸಮಸ್ಯೆಯನ್ನು ಪರಿಹರಿಸಲು ICAR ಗೆ ( Central Plantation Crops Reasech Institute ) ನಿರ್ದೇಶಿಸಿದ್ದಾರೆ.

ಈ ಬಗ್ಗೆ ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿದೆ ಮತ್ತು ಅಡಿಕೆಯ ಎಲೆ ಚುಕ್ಕೆಯನ್ನು ಪರಿಹರಿಸಲು ಸಮಿತಿಯು ಕಾರ್ಯತಂತ್ರಗಳನ್ನು ಅಭಿವೃದ್ಧಿಪಡಿಸುತ್ತದೆ, ತ್ವರಿತ ಪ್ರತಿಕ್ರಿಯೆಗಾಗಿ ಮಲೆನಾಡಿನ ರೈತರ ಪರವಾಗಿ ಕೇಂದ್ರ ಸಚಿವರಿಗೆ ಸಂಸದ ಬಿ.ವೈ ರಾಘವೇಂದ್ರ ಕೃತಜ್ಞತೆ ತಿಳಿಸಿದ್ದಾರೆ.
Comments are closed.