ಕರಾವಳಿ

ಸಬ್ ಜೈಲಿಗೆ ಕರೆದೊಯ್ಯುವಾಗ ಕುಂದಾಪುರ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಕಳವು ಆರೋಪಿ..!

Pinterest LinkedIn Tumblr

ಕುಂದಾಪುರ: ಕಳವು ಪ್ರಕರಣಕ್ಕೆ ಸಂಬಂಧಿತ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಮೊಬೈಲ್ ಅಂಗಡಿಯಲ್ಲಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು. ಆತನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕದ ಸಬ್ ಜೈಲಿಗೆ ಕರೆದೊಯ್ಯುವಾಗ ಜೈಲ್ ಸಮೀಪದಿಂದ ಇಬ್ಬರು ಪೊಲೀಸರಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.

ಭಟ್ಕಳ ಮೂಲದ ಮೊಹಮ್ಮದ್ ರಾಹಿಕ್ (22) ಪರಾರಿಯಾದ ಆರೋಪಿ.

ಕೆಲ ತಿಂಗಳ ಹಿಂದೆ ಬೀಜಾಡಿ ಸಮೀಪದಲ್ಲಿ ಮೊಬೈಲ್ ಅಂಗಡಿ ಕಳವು ಪ್ರಕರದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು ಎನ್ನಲಾಗಿದೆ.

ಸದ್ಯ ಪರಾರಿಯಾದ ಆರೋಪಿ ರಾಹಿಕ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Comments are closed.