ಕರ್ನಾಟಕ

500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ವಿಧಿವಶ

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ.

80 ವರ್ಷದ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿದ್ದು ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಖಳನಟನಾಗಿ ಗುರುತಿಸಿಕೊಂಡಿರುವ ಶರತ್ ಲೋಹಿತಾಶ್ವ ಸಹಿತ ಮೂರು ಮಕ್ಕಳಿದ್ದಾರೆ. ಅಭಿಮನ್ಯು, ಎಕೆ 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಲೋಹಿತಾಶ್ವ ಅವರು ನಟಿಸಿದ್ದಾರೆ.

Comments are closed.