ಕರಾವಳಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಶಿವಮೊಗ್ಗ ಮೂಲದ ಇಬ್ಬರ ಬಂಧನ

Pinterest LinkedIn Tumblr

ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಪ್ರವೀಣ, ಅಜಯ್ ಬಂಧಿತ ಆರೋಪಿಗಳು.

8ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯು ಠಾಣಾ ವ್ಯಾಪ್ತಿಯ ಗ್ರಾಮದಲ್ಲಿನ ತನ್ನ ಅಜ್ಜಿ ಮನೆಯಲ್ಲಿ ವಾಸವಾಗಿದ್ದು, ಇತ್ತೀಚೆಗೆ ಆಕೆ ಮನೆಯಲ್ಲಿರುವಾಗ ಆರೋಪಿಗಳು ಅವಳನ್ನು ಪುಸಲಾಯಿಸಿ ಮನೆಯ ಹತ್ತಿರದ ಪುಸಲಾಯಿಸಿ ಮನೆಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಅಪ್ರಾಪ್ತೆ ಮೈ ಕೈ ಮುಟ್ಟಿ ಆರೋಪಿಗಳು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿ ಪ್ರತಿರೋಧ ಒಡ್ಡಿದರೂ, ಅವಳ ಮಾತನ್ನು ಕೇಳದೇ ಆರೋಪಿಗಳು ಆಕೆಯೊಂದಿಗೆ ಲೈಂಗಿಕವಾಗಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ದೂರಲಾಗಿದೆ.

ಶಂಕರನಾರಯಣ ಪೊಲೀಸ್‌ ಠಾಣಾ ಪಿಎಸ್ಐ ಶ್ರೀಧರ್ ನಾಯ್ಕ್ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.

Comments are closed.