ಕರಾವಳಿ

ಸಹಕಾರಿ ಸಂಸ್ಥೆಗಳು ಜನರದ್ದು: ಮುದೂರು ವ್ಯ.ಸೇ. ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಡಾ. ಎಂ.ಎನ್. ರಾಜೇಂದ್ರ ಕುಮಾರ್

Pinterest LinkedIn Tumblr

ಕುಂದಾಪುರ: ಸಹಕಾರಿ ಕ್ಷೇತ್ರ ಆರಂಭಗೊಂಡು 120 ವರ್ಷವಾಗಿದ್ದು ಹಂತಹಂತವಾಗಿ ಬೆಳೆದು ಹೆಮ್ಮರವಾಗಿದೆ. ಸಹಕಾರಿ ರಂಗ ಜನರ ಬಳಿಗೆ ಹೋಗಿ ಕೆಲಸ ಮಾಡುತ್ತಿರುವ ಕಾರಣಕ್ಕೆ ಈ ಸಂಸ್ಥೆಗಳು ಜನರೇ ನಡೆಸುವ ಸಂಘಗಳಾಗಿದೆ. ಇಲ್ಲಿ ಸಿಗುವ ಸೌಲಭ್ಯಗಳು, ಪ್ರಯೋಜನಗಳು ಯಾವುದೇ ವಾಣಿಜ್ಯ ಬ್ಯಾಂಕ್‌ಗಳಲ್ಲಿ ಸಿಗುವುದಿಲ್ಲ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅವರು ಭಾನುವಾರ ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ ಪ್ರಧಾನ ಕಚೇರಿ ಸ್ಥಳಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಸಗೊಬ್ಬರ ಮಾರಾಟ ಮಳಿಗೆ ಉದ್ಘಾಟಿಸಿದ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ಹಳ್ಳಿ- ಹಳ್ಳಿಗಳಲ್ಲಿ ಸಹಕಾರಿ ಸಂಘ ಆರಂಭವಾಗಬೇಕು. ಗ್ರಾಮಕ್ಕೊಂದು ಸಹಕಾರಿ ಸಂಘ ಆರಂಭಿಸುವ ನಿಟ್ಟಿನಲ್ಲಿ ಕಾರ್‍ಯಪ್ರವೃತ್ತರಾಗಬೇಕಿದೆ ಎಂದರು.

ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಂಘದ ಅಧ್ಯಕ್ಷ ಎಂ. ವಿಜಯ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕ ಗೋಪಾಲ ಪೂಜಾರಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್. ರಾಜು ಪೂಜಾರಿ, ಎಂ. ಮಹೇಶ್ ಹೆಗ್ಡೆ, ಜಡ್ಕಲ್ ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷ ಲಕ್ಷ್ಮಣ ಶೆಟ್ಟಿ, ಸಂಘದ ಉಪಾಧ್ಯಕ್ಷ ನಕ್ಷತ್ರ ಭೋವಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಸುಕುಮಾರ ಶೆಟ್ಟಿ, ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷ ರಾಜೇಂದ್ರ ಕುಮಾರ್, ಗುತ್ತಿಗೆದಾರ ಸುಧಾಕರ್ ಅವರನ್ನು ಸಮ್ಮಾನಿಸಲಾಯಿತು.

ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್‍ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಪೂಜಾರಿ ಸ್ವಾಗತಿಸಿ, ಸಿಬ್ಬಂದಿ ಮಂಜುನಾಥ ವಂದಿಸಿದರು.

Comments are closed.