ಕರಾವಳಿ

ಉಡುಪಿ ಅಂಬಾಗಿಲಿನಲ್ಲಿ ಬೈಕಿಗೆ ಡಿಕ್ಕಿಯಾದ ಲಾರಿ: ಅಬಕಾರಿ ಸಬ್ ಇನ್ಸ್‌ಪೆಕ್ಟರ್ ದಾರುಣ ಮೃತ್ಯು

Pinterest LinkedIn Tumblr

ಉಡುಪಿ: ಬೈಕಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಅಂಬಾಗಿಲಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ರಾತ್ರಿ ನಡೆದಿದೆ.

ಅತೀ ವೇಗದಿಂದ ಲಾರಿಯನ್ನು ಚಲಾಯಿಸಿದ ಚಾಲಕ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅಬಕಾರಿ ಇಲಾಖೆಯ ಸಬ್ ಇನ್ಸ್‌ಪೆಕ್ಟರ್, ಬ್ರಹ್ಮಾವರ ಉಪ್ಪೂರು ನಿವಾಸಿ ಶಂಕರ್(52) ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶಂಕರ್ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.