ಕರಾವಳಿ

ಶಬರಿಮಲೆ ಯಾತ್ರೆ ಮುಗಿಸಿ ಬಂದ ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಮೇಲಿಂದ ಬಿದ್ದು ಮೃತ್ಯು

Pinterest LinkedIn Tumblr

ಕುಂದಾಪುರ: ಶಬರಿಮಲೆ ಯಾತ್ರೆ ಮುಗಿಸಿ ಬಂದು ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಸ್ಸಿನ ಮೇಲಿಂದ ಕೆಳಕ್ಕೆ ಬಿದ್ದು ಅಸ್ವಸ್ಥಗೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿಯಾದ ಶ್ರಿನಾಥ್ (25) ಮೃತ ದುರ್ದೈವಿ.

ಡಿ. 28 ರಂದು ಯಾತ್ರೆ ಮುಗಿಸಿ ಬಂದು ನಿಲ್ಲಿಸಿದ್ದ ಬಸ್ಸಿನ ಮೇಲೆ ಮಲಗಿದ್ದ ಶ್ರೀನಾಥ ಟಾಪ್ ಮೇಲಿಂದ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಡಿ.30ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.