ಪ್ರಮುಖ ವರದಿಗಳು

ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಐಷಾರಾಮಿ ಬಸ್‌-ಎಸ್‌ಯುವಿ ಕಾರು ಡಿಕ್ಕಿ:  9 ಮಂದಿ ಮೃತ್ಯು, 15ಕ್ಕೂ ಹೆಚ್ಚು ಮಂದಿಗೆ ಗಾಯ

Pinterest LinkedIn Tumblr

ಗುಜರಾತ್: ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಮೃತಪಟ್ಟಿದ್ದಾರೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಬಸ್ ವಲ್ಸಾದ್ ಕಡೆಗೆ ಹೋಗುತ್ತಿದ್ದಾಗ ವೆಸ್ಮಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಎಸ್‌ಯುವಿ ವಿರುದ್ಧ ದಿಕ್ಕಿನಿಂದ ಬರುತ್ತಿತ್ತು ಎಂದು ನವಸಾರಿ ಪೊಲೀಸ್ ವರಿಷ್ಠಾಧಿಕಾರಿ ರುಶಿಕೇಶ್ ಉಪಾಧ್ಯಾಯ ತಿಳಿಸಿದ್ದಾರೆ.

ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನರ ಪೈಕಿ ಎಂಟು ಮಂದಿ ಹಾಗೂ ಬಸ್‌ನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದವರು ಗುಜರಾತ್ ನ ಅಂಕಲೇಶ್ವರ ನಿವಾಸಿಗಳಾಗಿದ್ದು, ಅವರು ವಲ್ಸಾದ್‌ನಿಂದ ತಮ್ಮ ಊರಿಗೆ ಹಿಂತಿರುಗುತ್ತಿದ್ದರು. ಬಸ್‌ನ ಪ್ರಯಾಣಿಕರು ವಲ್ಸಾದ್‌ನಿಂದ ಬಂದವರು ಎಂದು ಹೇಳಿದರು.

Comments are closed.