ವಿಜಯಪುರ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ 6 ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಶ್ರೀಗಳಿಗೆ 82 ವರ್ಷ ವಯಸ್ಸಾಗಿತ್ತು.

ನಾಡಿನ ಮೂಲೆಮೂಲೆಯಿಂದ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಜ್ಞಾನಯೋಗಾಶ್ರಮದತ್ತ ಧಾವಿಸುತ್ತಿದ್ದಾರೆ. ಭಕ್ತರ ವಾಹನ ಸಂಚಾರ ನಿಯಂತ್ರಣ, ಭಕ್ತರ ಅನುಕೂಲಕ್ಕಾಗಿ ಮುನ್ನೆಚ್ಚರಿಕೆಯಾಗಿ ಕ್ರಮ ವಹಿಸಲಾಗಿದೆ.
ಶ್ರೀಗಳಿಗೆ ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಅಪಾರ ಪಾಂಡಿತ್ಯವಿತ್ತು.
ಅತ್ಯಂತ ಸರಳ ಸಜ್ಜನಿಕೆ ಸಿದ್ಧೇಶ್ವರ ಸ್ವಾಮಿಗಳರದ್ದು. ಶ್ರೀಗಳ ನಿಧನಕ್ಕೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಶ್ರೀಗಳವರ ಆರೋಗ್ಯ ವಿಚಾರಿಸಲು ಆಗಮಿಸಿದ್ದಾಗ ಪ್ರಧಾನಿ ಮೋದಿ ದೂರವಾಣಿ ಕರೆ ಮೂಲಕ ಶ್ರೀಗಳವರ ಆರೋಗ್ಯ ವಿಚಾರಿಸಿದ್ದರು.
Comments are closed.