ಕರಾವಳಿ

ಖಾಸಗಿ ಬಸ್-ಬೈಕ್ ನಡುವೆ ಅಪಘಾತ; ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

Pinterest LinkedIn Tumblr

ಕುಂದಾಪುರ: ಖಾಸಗಿ ಬಸ್ಸಿಗೆ ಬೈಕ್‌ ಢಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರವಿವಾರ ಕೋಟದಲ್ಲಿ ಸಂಭವಿಸಿತ್ತು. ಈ ದುರ್ಘ‌ಟನೆಯಲ್ಲಿ ಗಾಯಾಳುವಾಗಿದ್ದ ಬೈಕ್‌ ಸವಾರ ಕೋಟೇಶ್ವರದ ವಕ್ವಾಡಿ ನಿವಾಸಿ ಗಣೇಶ್‌ ಪೂಜಾರಿ (33) ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಸೊಮವಾರ ಮೃತಪಟ್ಟಿದ್ದಾರೆ.

ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಬಸ್ಸು ಏಕಾಏಕಿ ರಾಷ್ಟ್ರೀಯ ಹೆದ್ದಾರಿ ಕೋಟ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದು, ಈ ಸಂದರ್ಭ ಹಿಂಬದಿಯಿಂದ ಬರುತ್ತಿದ್ದ ಬೈಕ್‌ ಬಸ್ಸಿಗೆ ಢಿಕ್ಕಿ ಹೊಡೆದಿದ್ದು ಇದರಿಂದಾಗಿ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಣೇಶ್‌ ಮತ್ತು ಸಹ ಸವಾರ ಸುಮಂತ್‌ ಗಂಭೀರ ಗಾಯಗೊಂಡಿದ್ದರು. ತತ್‌ಕ್ಷಣ ಅವರನ್ನು ಕೋಟ ಜೀವನ್‌ ಮಿತ್ರ ಆಂಬುಲೆನ್ಸ್‌ ನಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಗಣೇಶ್ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಗಣೇಶ್‌ ಅವರು ಬೀಜಾಡಿಯ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದು ತಂದೆ, ತಾಯಿ, ಕಿರಿಯ ಸಹೋದರಿಯನ್ನು ಅಗಲಿದ್ದಾರೆ. ಗಣೇಶ್‌ನ ಸಹೋದರಿಗೆ ವಿವಾಹ ನಿಶ್ಚಯವಾಗಿದ್ದು ಮೇ ತಿಂಗಳಿನಲ್ಲಿ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ. ಇದೀಗ ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

 

 

Comments are closed.