ಕರ್ನಾಟಕ

ಮೈಸೂರು ಭಾಗದಲ್ಲಿ ಭೀತಿ ಸೃಷ್ಟಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿದ ಅರಣ್ಯ ಇಲಾಖೆ..!

Pinterest LinkedIn Tumblr

ಮೈಸೂರು: ಬಾಲಕನನ್ನು ಬಲಿ ಪಡೆದ ಚಿರತೆಯನ್ನು ಕೊನೆಗೂ ಇಂದು ಗುರುವಾರ ಬೆಳಿಗ್ಗೆ ಸೆರೆ ಹಿಡಿದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಹಲವು ತಿಂಗಳಿಂದ ಚಿರತೆ ಉಪಟಳ ಜಾಸ್ಥಿಯಾಗಿದ್ದು, ಜನವರಿ 12ರಂದು ಟಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಚಿರತೆ ಬಲಿ ಪಡೆದಿತ್ತು. ಇಂದು ಬೆಳಗ್ಗೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನ ಮೂಲಕ ಚಿರತೆ ಸೆರೆಯಾಗಿದೆ. ಚಿರತೆಯನ್ನು ಕೊಲ್ಲಲು ಸಾರ್ವಜನಿಕರು ಈ ವೇಳೆ ಪಟ್ಟು ಹಿಡಿದರು. ಅರಣ್ಯ ಅಧಿಕಾರಿಗಳು ಚಿರತೆಯನ್ನು ಕೊಂಡೊಯ್ದಿದ್ದಾರೆ.

ಚಿರತೆ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಮುಖ್ಯಮಂತ್ರಿ ಬೊಮ್ಮಾಯಿ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ, ‘ಮೈಸೂರಿನ ಭಾಗದ ಸಾರ್ವಜನಿಕರಿಗೆ ಭೀತಿಯನ್ನುಂಟು ಮಾಡಿದ್ದ, ನರಭಕ್ಷಕ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದು, ಸಾರ್ವಜನಿಕರ ನೆಮ್ಮದಿಗೆ ಕಾರಣರಾದ ಅರಣ್ಯ ಅಧಿಕಾರಿಗಳ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಚಿರತೆ ಕಾರ್ಯಪಡೆಯನ್ನು ರಚಿಸಿ, ಇಂದೇ ಸರಕಾರಿ ಆದೇಶ ಹೊರಡಿಸಲಾಗುವುದು’ ಎಂದಿದ್ದಾರೆ.

Comments are closed.