ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಫುಡ್ ಪಾಯ್ಸನ್ ಆಗಿ ಅಸ್ವಸ್ಥಗೊಂಡಿದ್ದು ಅವರನ್ನು ಚಿಕಿತ್ಸೆ ಸಲುವಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈ ವಿದ್ಯಾರ್ಥಿಗಳು ಮಂಗಳೂರು ಸಿಟಿ ಆಸ್ಪತ್ರೆ ಅಧೀನದ ನಗರದ ಹೊರವಲಯದ ಶಕ್ತಿನಗರದಲ್ಲಿರುವ ನರ್ಸಿಂಗ್ ಕಾಲೇಜಿನ ವಸತಿಗೃಹದಲ್ಲಿ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದರು.
ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿನಿಯರಿಗೆ ಯಾವುದೇ ಅಪಾಯವಿಲ್ಲ, ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ. ನಗರದ ಮೂರು ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ಅವರು ಆಸ್ಪತ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬ ಬಗ್ಗೆ ಈಗಾಗಾಲೇ ತನಿಖೆ ಕೈಗೊಳ್ಳಲಾಗಿದೆ.
Comments are closed.