ಬೆಂಗಳೂರು: ಇತ್ತೀಚೆಗೆ ತೆರೆಕಂಡು ನಿರೀಕ್ಷೆಗೆ ಮೀರಿ ಯಶಸ್ಸು ಕಂಡ ‘ಕಾಂತಾರ’ ಸಿನಿಮಾ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಪ್ರಶಸ್ತಿ ಸಿಕ್ಕಿದೆ. ಇದು ಕೇಂದ್ರ ಸರ್ಕಾರ ನೀಡುವ ಪ್ರಶಸ್ತಿಯಲ್ಲ, ಬದಲಾಗಿ ಖಾಸಗಿ ಸಂಸ್ಥೆಯ ಪ್ರಶಸ್ತಿ ಎನ್ನಲಾಗಿದೆ.

ನಟ ರಿಷಬ್ ಶೆಟ್ಟಿ ಅವರಿಗೆ ‘ಅತ್ಯಂತ ಭರವಸೆಯ ನಟ’ ವಿಭಾಗದಲ್ಲಿ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಶನಲ್ ಫಿಲ್ಮ್ ಪ್ರಶಸ್ತಿ ದೊರಕಿದೆ.
ದೊಡ್ಡ ಮಟ್ಟದ ಯಶಸ್ಸು ಕಂಡ ‘ಕಾಂತಾರ’ ಸಿನಿಮಾವು ರಿಷಬ್ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಅಂದಾಜು 17 ಕೋಟಿ ರೂಪಾಯಿ ಬಜೆಟ್‌ನಲ್ಲಿ ‘ಕಾಂತಾರ’ ಸಿನಿಮಾ ಮಾಡಲಾಗಿತ್ತು. ಈ ಸಿನಿಮಾ ಬರೋಬ್ಬರಿ 450 ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆದು ಫ್ಯಾನ್ ಇಂಡಿಯಾ ಸಿನೆಮಾ ಆಗಿತ್ತು.
Comments are closed.