ಕರಾವಳಿ

ಕೋಡಿ ಕನ್ಯಾನ ಜನರಿಗೆ ಹಕ್ಕುಪತ್ರ ವಿತರಿಸಲು ಕ್ರಮ: ಸಚಿವ ಕೋಟ, ಶಾಸಕ ಹಾಲಾಡಿ ನೇತೃತ್ವದಲ್ಲಿ ಮಹತ್ವದ ಸಭೆ

Pinterest LinkedIn Tumblr

ಬೆಂಗಳೂರು: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನದ ಹಕ್ಕುಪತ್ರದ ವಿಚಾರ ಕುರಿತು ವಿಧಾನಸೌಧದ ಕೋಟ ಶ್ರೀನಿವಾಸ ಪೂಜಾರಿಯವರ ಕಛೇರಿಯಲ್ಲಿ ಇಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ಜರುಗಿತು.

ಸುಧೀರ್ಘ ಚರ್ಚೆಯಲ್ಲಿ ಪರಂಪೋಕು ಮತ್ತು ಸಿ.ಆರ್.ಝಡ್. ಸಮಸ್ಯೆಗಳ ಬಗ್ಗೆ ಚರ್ಚಿಸಿ ಕಡತಗಳ ವಿಲೇವಾರಿಗೆ ಶೀಘ್ರ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಕಂದಾಯ ಇಲಾಖೆಯ ಸಮಸ್ಯೆಗಳು ಮತ್ತು ಸಿ.ಆರ್.ಝಡ್. ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ವಿವರಿಸಿ ಕೂಡಲೇ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಶೀಘ್ರದಲ್ಲಿ ಕೋಡಿ ಕನ್ಯಾನ ಜನರಿಗೆ ಹಕ್ಕುಪತ್ರ ವಿತರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೋಟ ತಿಳಿಸಿದ್ದಾರೆ.

ಸರ್ವೇ ಇಲಾಖೆಯ ಆಯುಕ್ತರಾದ ಸಿ. ಶ್ರೀದರ್, ಕಂದಾಯ ಇಲಾಖೆಯ ಡಿಎಸ್ ಕವಿತಾ ರಾಣಿ , ಕುಂದಾಪುರ ಎಸಿ ರಶ್ಮಿ, ಕುಂದಾಪುರ ಹಾಗೂ ಬ್ರಹ್ಮಾವರ ತಹಶಿಲ್ದಾರರು ಹಾಗೂ ಸಂಬಂಧಪಟ್ಟ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.