ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.

ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎನ್ನುವರಿಗೆ ಇರಿದು ಕೊಲೆಗೆ ಯತ್ನಿಸಲಾಗಿದೆ. ಗಾಯಾಳು ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ನಡುವೆ ವೈಷಮ್ಯವಿತ್ತು. ಇದಕ್ಕಾಗಿ ದಾಳಿ ನಡೆದಿರುವ ಸಾಧ್ಯತೆಯಿದೆ ಎಂದು ಉಳ್ಳಾಲ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆಗೆ ಶಾಸಕ ಯು.ಟಿ ಖಾದರ್ ಭೇಟಿ:
ಶಾಸಕ ಯು.ಟಿ ಖಾದರ್ ಅವರು ತಡರಾತ್ರಿ ಇಂಡಿಯಾನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ವಿವರ ಪಡೆದುಕೊಂಡಿದ್ದಾರೆ. ಅಲ್ಲದೆ ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಲು ಪೊಲೀಸರಿಗೆ ನಿರ್ದೇಶಿಸಿದ್ದಾರೆ.
Comments are closed.