ಪ್ರಮುಖ ವರದಿಗಳು

ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ

Pinterest LinkedIn Tumblr

ನವದೆಹಲಿ: ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ದೊರಕಿದೆ. ಲಾಸ್ ಎಂಜಲೀಸ್‌ನಲ್ಲಿ ನಡೆಯುತ್ತಿರುವ ಅದ್ದೂರಿ ಸಮಾರಂಭದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ಆಸ್ಕರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಉತ್ತಮ ಸಾಕ್ಷ್ಯ ಚಿತ್ರ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರ್ಸ್’ ಸಾಕ್ಷ್ಯಚಿತ್ರವು ಈ ಪ್ರಶಸ್ತಿ ಪಡೆದುಕೊಂಡಿದ್ದು, ಭಾರತದಿಂದ ಈ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡ ಮೊದಲ ಸಾಕ್ಷ್ಯಚಿತ್ರ ಎಂಬ ಸಾಧನೆಯನ್ನು ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ ಮಾಡಿದೆ.

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಲಭಿಸಿದೆ. ಡಾಕ್ಯುಮೆಂಟರಿಗೆ ಕಾರ್ತಿಕಿ ಗೋನ್ಸಲ್ವೆಸ್‌ ಅವರು ನಿರ್ದೇಶನ ಮಾಡಿದ್ದಾರೆ. ಆನೆಯನ್ನು ಸಾಕಿದ ಇಬ್ಬರ ಕುರಿತಾದ ಸಾಕ್ಷ್ಯಚಿತ್ರ ಇದಾಗಿದ್ದು ಡಾಕ್ಯುಮೆಂಟರಿ ನಿರ್ಮಾಣಕ್ಕೆ ನಿರ್ದೇಶಕರು 5 ವರ್ಷ ತೆಗೆದುಕೊಂಡಿದ್ದರು.

 

 

Comments are closed.