ಕರ್ನಾಟಕ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ, ಮೇ 13ಕ್ಕೆ ಫಲಿತಾಂಶ; ಇಂದಿನಿಂದಲೇ ನೀತಿ ಸಂಹಿತೆ ಜಾರಿ

Pinterest LinkedIn Tumblr

ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ‘ಮಾದರಿ ನೀತಿ ಸಂಹಿತೆ’ ಜಾರಿಗೆ ಬಂದಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸಿದ್ದು ಒಂದೇ ಹಂತದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನು ಕರ್ನಾಟಕದಲ್ಲಿ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರಿದ್ದಾರೆ. 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ.

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಮಾಹಿತಿ ನೀಡಿದರು.

Comments are closed.