ಕರಾವಳಿ

ಕೊಲ್ಲೂರು ಸಮೀಪದ ಹಾಲ್ಕಲ್ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, ಹಲವರಿಗೆ ಗಾಯ

Pinterest LinkedIn Tumblr

ಕುಂದಾಪುರ: ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾಗಿದ್ದರಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲೂರು ಹಾಲ್ಕಲ್ ತಿರುವು ಬಳಿ ಬುಧವಾರ ಮುಂಜಾನೆ ನಡೆದಿದೆ.

ಗದಗ ಶಿರಹಟ್ಟಿ ಮೂಲದ ಬಸವರಾಜ್(23) ಎಂದು ಗುರುತಿಸಲಾಗಿದೆ. ಗಂಭಿರ ಗಾಯಗೊಂಡವರನ್ನು ಬಸ್ಸಿನಲ್ಲಿದ್ದ ರಂಗಪ್ಪ, ಗೀರೀಶ್, ಮನೋಜ್ ಕುಮಾರ್, ಮಲ್ಲೇಶ್, ದೇವೇಂದ್ರಪ್ಪ, ಹಾಲಸ್ವಾಮಿ ಸಹಿತ ಇನ್ನಿತರರಿಗೆ ಗಾಯಗಳಾಗಿದೆ.

ಸುಮಾರು 35ರಿಂದ 40 ಪ್ರಯಾಣಿಕರಿದ್ದ ದುರ್ಗಾಂಬಾ ಬಸ್ ಚಿತ್ರದುರ್ಗದಿಂದ ಮಂಗಳೂರಿಗೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಬುಧವಾರ ಮುಂಜಾನೆ ಸುಮಾರು 2.30 ಗಂಟೆಗೆ ಕೊಲ್ಲೂರು ಹಾಲ್ಕಲ್ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಉರುಳಿದೆ. ವಿದ್ಯುತ್ ಕಂಬ ಕೂಡ ಬಸ್ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಬಸವರಾಜ್ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆ, ಕುಂದಾಪುರದ ಖಾಸಗಿ ಆಸ್ಪತ್ರೆ ಹಾಗೂ ಗಂಭೀರ ಗಾಯಗೊಂಡವರನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.