ಕರ್ನಾಟಕ

ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಅಥವಾ ನಾಡಿದ್ದು ಬಿಡುಗಡೆ: ಸಿಎಂ ಬೊಮ್ಮಾಯಿ

Pinterest LinkedIn Tumblr

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಈಗಾಗಲೇ ಬಿಜೆಪಿ ವರಿಷ್ಠರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಈಗಾಗಾಲೇ ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಒಂದು ಹಂತದ ಮಾತುಕತೆ ನಡೆದಿದೆ. ನಾಳೆ ಮತ್ತೆ ಮುಂದುವರಿಯುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಯಾವ ಭಾಗದಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಇಲ್ಲ, ನಾಳೆ ಒಂದು ಸ್ಪಷ್ಟ ಚಿತ್ರಣ ಹೊರಬರಲಿದೆ. ಹಾಲಿ 20ಕ್ಕೂ ಹೆಚ್ಚು ಶಾಸಕರ ಟಿಕೆಟ್ ಕೈತಪ್ಪಿಹೋಗಲಿದೆ ಎಂಬುದು ಕೇವಲ ಊಹಾಪೋಹ. ಈಗಾಗಲೇ ಎರಡು ಬಾರಿ ಚರ್ಚೆಯಾಗಲಿದೆ ಅದರ ಫಲಶ್ರುತಿ ನಾಳೆ ಹೊರಬರಲಿದ್ದು, ನಾಳೆ ಸಂಸದೀಯ ಮಂಡಳಿ ಸಭೆ ನಡೆದ ಬಳಿಕ ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

 

Comments are closed.