ಕರ್ನಾಟಕ

ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವೆ, ನನಗೆ ಟಿಕೆಟ್ ಬೇಡ: ಜೆ.ಪಿ ನಡ್ಡಾಗೆ ಪತ್ರ ಬರೆದ ಕೆ.ಎಸ್ ಈಶ್ವರಪ್ಪ..!

Pinterest LinkedIn Tumblr

ಶಿವಮೊಗ್ಗ: ನಾನು ಸ್ವ ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬರೆದಿದ್ದರೆನ್ನಲಾದ ಪತ್ರವೊಂದು ಜಾಲತಾಣದಲ್ಲಿ ವೈರಲ್ ಆಗಿದೆ.

ಇಂದಿನ ದಿನಾಂಕದಲ್ಲಿ (11-04-2023) ಭಾಜಪಾ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾಜಿ (ಜೆಪಿ ನಡ್ಡಾ) ಹೆಸರಿಗೆ ಬರೆದಂತ ಪತ್ರ ವೈರಲ್ ಆಗಿದೆ.

“ಕಳೆದ 40 ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪಮುಖ್ಯಮಂತ್ರಿ ವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು” ಎಂಬುದಾಗಿಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಶಿವಮೊಗ್ಗ ನಗರ ಶಾಸಕ, ಮಾಜಿ ಉಪಮುಖ್ಯಮಂತ್ರಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.

Comments are closed.