ಕರಾವಳಿ

ಕೊನೆಗೂ ಬಿಜೆಪಿ ಟಿಕೆಟ್ ಘೋಷಣೆ: ಕರಾವಳಿಯಲ್ಲಿ ಬಹುತೇಕ ಹೊಸಬರಿಗೆ ಮಣೆ: ಭಾಜಪಾ ಲೆಕ್ಕಾಚಾರ ಸಿಕ್ರೇಟ್…!

Pinterest LinkedIn Tumblr

ಮಂಗಳೂರು/ ಉಡುಪಿ: ಮುಂದಿನ ತಿಂಗಳು (ಮೇ.10) ನಡೆಯುಲಿರುವ ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಈ ಭಾರಿ ಕರಾವಳಿಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಉಡುಪಿಯಲ್ಲಿ ಐದು ಕ್ಷೇತ್ರದ ಪೈಕಿ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು ಕಾರ್ಕಳದಲ್ಲಿ ಸುನೀಲ್ ಕುಮಾರ್ ಬಿಟ್ಟರೆ ಮೂವರು ಅಭ್ಯರ್ಥಿಗಳು ಹೊಸಬರು.

ಮಂಗಳೂರು ದಕ್ಷಿಣ ವೇದವ್ಯಾಸ್ ಕಾಮತ್ ಅವರೇ ಮುಂದುವರೆದಿದ್ದು, ಮಂಗಳೂರು ಉತ್ತರ ಡಾ. ಭರತ್ ಶೆಟ್ಟಿ ವೈ, ಮಂಗಳೂರು ಕ್ಷೇತ್ರಕ್ಕೆ ಸತೀಶ್ ಕುಂಪಲ ಅವರನ್ನು ಮುಂದುವರೆಸಿದೆ.

ಬಂಟ್ವಾಳದಲ್ಲೂ ರಾಜೇಶ್ ನಾಯ್ಕ್, ಬೆಳ್ತಂಗಡಿಗೆ ಹರೀಶ್ ಪೂಂಜ, ಮೂಡುಬಿದ್ರಿಗೆ ಉಮಾನಾಥ್ ಕೋಟ್ಯಾನ್, ಪುತ್ತೂರು ಕ್ಷೇತ್ರಕ್ಕೆ ಸಂಜೀವ ಮಠಂದೂರು ಅವರ ಬದಲಿಗೆ ಆಶಾ ತಿಮ್ಮಪ್ಪ ಗೌಡ, ಸುಳ್ಯ ಅಂಗಾರ ಅವರ ಬದಲಿಗೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಉಡುಪಿ ಕ್ಷೇತ್ರದಲ್ಲಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಅಲ್ಲಿಗೆ ಯಶಪಾಲ್ ಸುವರ್ಣ ಅವರಿಗೆ ಅವಕಾಶ ನೀಡಲಾಗಿದೆ. ಕಾಪು ಕ್ಷೇತ್ರದಲ್ಲಿ ಲಾಲಾಜಿ ಮೆಂಡನ್ ಬದಲಿಗೆ ಸುರೇಶ್ ಶೆಟ್ಟಿ ಗುರ್ಮೆ, ಕಾರ್ಕಳದಲ್ಲಿ ಹಾಲಿ ಶಾಸಕ ಸುನೀಲ್ ಕುಮಾರ್, ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಅವಕಾಶ ನೀಡಲಾಗಿದೆ. ಬೈಂದೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮುಂದಿನ ಪಟ್ಟಿಯಲ್ಲಿ ಬರಲಿದ್ದು ಯಾರು ಎಂಬುದು ಇನ್ನೂ ನಿಗೂಢವಾಗಿಯೇ ಇದೆ.

Comments are closed.