ಕರಾವಳಿ

ಬೈಂದೂರು ಕ್ಷೇತ್ರ; ಟಿಕೆಟ್ ಕಳೆದುಕೊಂಡ ಹಾಲಿ ಶಾಸಕ ಸುಕುಮಾರ್ ಶೆಟ್ಟಿ, ಸಂಘ ಪರಿವಾರದ ಗುರುರಾಜ್ ಗಂಟಿಹೊಳೆ ಬಿಜೆಪಿ ಅಭ್ಯರ್ಥಿ

Pinterest LinkedIn Tumblr

ಉಡುಪಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗಡೆಗೊಳಿಸಿದೆ. ಈ ಬಾರಿ ಬೈಂದೂರು ಕ್ಷೇತ್ರದಿಂದ ಹೊಸ ಮುಖಕ್ಕೆ ಮಣೆ ಹಾಕಿದ್ದು ಗುರುರಾಜ್ ಗಂಟಿಹೊಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಗುರುರಾಜ್ ಗಂಟಿಹೊಳೆಯವರು ಸಂಘಪರಿವಾರದ ರಾಷ್ಟ್ರೀಯ ಸ್ವಯಂಸೇವಕ‌ಸಂಘದ ಹಿನ್ನೆಲೆಯಿಂದ ಬಂದಿದ್ದು ವಿವಿಧ ಕಡೆ ಆರ್.ಎಸ್.ಎಸ್ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡಿದವರು.

ಈ ಮೂಲಕ ಹಾಲಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಕೋಕ್ ನೀಡಿದೆ. ಉಡುಪಿ ಜಿಲ್ಲೆಯ ಒಟ್ಟು ಐದು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಹಂಚಿಕೆ ಮುಗಿದಿದ್ದು ಕಾರ್ಕಳದ ಹಾಲಿ ಶಾಸಕ ಸುನಿಲ್ ಕುಮಾರ್ ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕುವ ಮೂಲಕ ಹೊಸ ರಾಜಕೀಯ ತಂತ್ರಗಾರಿಕೆ ಮಾಡಲು ಹೊರಟಿದೆ.

Comments are closed.