ಕರಾವಳಿ

ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಕುಂದಾಪುರ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಎಸ್.ಆರ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಸಹಾಯಕ ಚುನಾವಣಾಧಿಕಾರಿ‌ ಶೋಭಾಲಕ್ಷ್ಮೀ ಇದ್ದರು.

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ. ಈಗಾಗಾಲೇ ಮತದಾರರನ್ನು ಭೇಟಿ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಜನರು ಬಿಜೆಪಿ ಪರವಾಗಿದ್ದಾರೆ. ಅಭೂತಪೂರ್ವ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಅಧ್ಯಕ್ಷ ಕಾಡೂರು ಸುರೇಶ ಶೆಟ್ಟಿ, ಪಕ್ಷದ ಮುಖಂಡರಾದ ಸಂಪತ್ ಕುಮಾರ್ ಶೆಟ್ಟಿ, ರಾಜು ಪೂಜಾರಿ ಕಾರ್ಕಡ, ಸುರೇಶ್ ಶೆಟ್ಟಿ ಬೀಜಾಡಿ, ಸಂತೋಷ್ ಕುಮಾರ್ ಶೆಟ್ಟಿ ಇದ್ಧರು.

Comments are closed.