ಕರಾವಳಿ

ಕುಂದಾಪುರ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಕುಂದಾಪುರ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಎಸ್.ಆರ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಈಗಾಗಾಲೇ ಒಂದು ಸುತ್ತು ಎಲ್ಲಾ ಬೂತ್ ಸಂಪರ್ಕ ಮಾಡುವ ಕಾರ್ಯ ಮಾಡಲಾಗಿದೆ. ಮಹಿಳಾ ಸಮಾವೇಶ ಸಹಿತ, ವಿವಿದೆಡೆ ಸಭೆಗಳನ್ನು ಮಾಡಲಾಗಿದೆ. ಕಳೆದ ಇಪ್ಪತ್ತೈದು ವರ್ಷಗಳಿಂದ ಬೇರೊಂದು ಪಕ್ಷದ ಶಾಸಕರಿದ್ದು ಈಗ ಅಭ್ಯರ್ಥಿ ಬದಲಾವಣೆ ಕೂಡ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ. ಕಾರ್ಯಕರ್ತರು ಕೂಡ ಅತ್ಯುತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ಕೋಟ, ಮುಖಂಡರಾದ ಅಶೋಕ್ ಪೂಜಾರಿ ಬೀಜಾಡಿ, ಚಂದ್ರಶೇಖರ ಶೆಟ್ಟಿ ಮೊಳಹಳ್ಳಿ, ಮಹಿಳಾ ಕಾಂಗ್ರೆಸ್‌ನ ದೇವಕಿ ಸಣ್ಣಯ್ಯ ಇದ್ದರು.

Comments are closed.