ಕರಾವಳಿ

ಶಾಸಕ ಹಾಲಾಡಿಯವರನ್ನು ಭೇಟಿ ಮಾಡಿ ಬೆಂಬಲ ಯಾಚಿಸಿದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ

Pinterest LinkedIn Tumblr

ಕುಂದಾಪುರ: ಬೈಂದೂರು ಬಿಜೆಪಿ ಅಭ್ಯರ್ಥಿ, ಸಂಘ ಪರಿವಾರದ ಹಿನ್ನೆಲೆಯ ಗುರುರಾಜ ಗಂಟಿಹೊಳೆ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಶನಿವಾರ ಬೆಳಗ್ಗೆ ಹಾಲಾಡಿಯವರ ನಿವಾಸದಲ್ಲಿ ಭೇಟಿಯಾಗಿ, ಆಶೀರ್ವಾದ ಪಡೆದು, ಚುನಾವಣೆಗೆ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪಕ್ಷದ ಹಿರಿಯ ನಾಯಕರು, ಪ್ರಮುಖರು ನನಗೆ ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮನವಿ‌ ಮಾಡಿದ್ದಾರೆ. ಇದು ನನ್ನ ಕರ್ತವ್ಯವೂ ಹೌದು. ಯುವ ನಾಯಕ ಗುರುರಾಜ್ ಅವರಿಗೆ ಎಲ್ಲರ ಬೆಂಬಲ, ಸಹಕಾರ ಬೇಕಾಗಿದೆ ಎಂದರು.

ಅಭ್ಯರ್ಥಿ ಗುರುರಾಜ ಗಂಟಿಹೊಳೆ ಮಾತನಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟರು ನಮಗೆಲ್ಲ ಆದರ್ಶಪ್ರಾಯರಾಗಿದ್ದು ಅವರ ಆರ್ಶಿವಾದವನ್ನು ಪಡೆದಿದ್ದೇನೆ. ಹಾಲಾಡಿಯವರ ಬೆಂಬಲ, ಸಹಕಾರ ಸಿಕ್ಕಿದ್ದರಿಂದ ಈಗ ನನಗೆ ಧೈರ್ಯ ಬಂದಿದೆ. ಅವರ ಸಾಮಾಜಿಕ ಕೈಂಕರ್ಯ ನಮಗೆಲ್ಲ ಮಾದರಿ ಎಂದು ಹೇಳಿದಲ್ಲದೆ ಬೈಂದೂರು ಹಾಲಿ ಶಾಸಕ ಸುಕುಮಾರ್ ಶೆಟ್ಟರನ್ನು ಭೇಟಿಯಾಗಿದ್ದು, ಅವರು ಸಹ ನಾನಿದ್ದೇನೆ ಎನ್ನುವ ಮಾತನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

Comments are closed.