ಕರ್ನಾಟಕ

ನಾಮಪತ್ರ ಸಲ್ಲಿಕೆಗೂ ಮುನ್ನ ದೇವೇಗೌಡರ ಆಶೀರ್ವಾದ ಪಡೆದು ಭಾವುಕರಾದ ನಿಖಿಲ್ ಕುಮಾರಸ್ವಾಮಿ

Pinterest LinkedIn Tumblr

ರಾಮನಗರ: ನಾಮಪತ್ರ ಸಲ್ಲಿಕೆಗೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ ತಾತನ ಆಶೀರ್ವಾದ ಪಡೆದು ಭಾವುಕರಾದರು.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, “ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಇಂದು ಬೆಳಗ್ಗೆ ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರ ಆಶೀರ್ವಾದ ಪಡೆದೆ.

ಈ ವೇಳೆ ನಮ್ಮ ತಂದೆಯವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು, ನಮ್ಮ ತಾಯಿಯವರು, ರಾಮನಗರ ಕ್ಷೇತ್ರದ ಶಾಸಕರೂ ಆಗಿರುವ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಉಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೆ ಮೊದಲು ಕುಟುಂಬ ಸಮೇತ ದೊಡ್ಡವರಿಂದ ಆಶೀರ್ವಾದ ಪಡೆದಿದ್ದು ನನ್ನ ಪಾಲಿಗೆ ಭಾವುಕ ಕ್ಷಣವಾಗಿತ್ತು.” ಎಂದು ಬರೆದುಕೊಂಡಿದ್ದಾರೆ.

Comments are closed.