ಕರ್ನಾಟಕ

ಸಿಎಂ ಬೊಮ್ಮಾಯಿ‌ ನಾಮಪತ್ರ ಸಲ್ಲಿಕೆ; ಬಿಜೆಪಿ 125ಕ್ಕೂ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೇರಲಿದೆ: ಬೊಮ್ಮಾಯಿ

Pinterest LinkedIn Tumblr

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬಸವರಾಜ ಬೊಮ್ಮಾಯಿ ಎ.19 ಬುಧವಾರ ನಾಮಪತ್ರ ಸಲ್ಲಿಸಿದರು.

ಶಿಗ್ಗಾಂವಿ ಚೆನ್ನಮ್ಮ ಸರ್ಕಲ್ ನಿಂದ ರೋಡ್ ಶೋ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ ನಂತರ ಬಹಿರಂಗ ಸಮಾವೇಶ ನಡೆಸಿ ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದು ನಟ ಕಿಚ್ಚ ಸುದೀಪ್ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ಶಿಗ್ಗಾಂವಿ ಕ್ಷೇತ್ರದ ಜನರ ಪ್ರೀತಿಗೆ ನಾನು ಸೋತಿದ್ದೇನೆ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆ. ನಾನು ಸಿಎಂ ಆಗಿ ವಿದ್ಯಾರ್ಥಿಗಳು, ರೈತರಿಗಾಗಿ ಯೋಜನೆ ಜಾರಿ ಮಾಡಿದ್ದೇನೆ ಎಂದು ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಟ ಕಿಚ್ಚ ಸುದೀಪ್ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಾನು ಪ್ರಚಾರಕ್ಕೆ ಬಂದಿದ್ದೇನೆ. ಶಿಗ್ಗಾಂವಿಯಲ್ಲಿ ಪ್ರಚಾರ ಆರಂಭಿಸಿದ್ದಕ್ಕೆ ಬಹಳ ಖುಷಿಯಾಗಿದೆ. ಸಿಎಂ ಬೊಮ್ಮಾಯಿಯವರು ಕಡಿಮೆ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದಗಳು. ನಾನು ಭಾರತೀಯನಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ ಹೇಳಿದರು.

Comments are closed.