(ವರದಿ- ಯೋಗೀಶ್ ಕುಂಭಾಸಿ)
ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಐದಕ್ಕೆ ಐದು ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಳ್ಳುವ ಮೂಲಕ ವಿಜಯದ ನಗೆ ಬೀರಿದೆ.




ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಕಾಂಗ್ರೆಸ್ ಅಭ್ಯರ್ಥಿ ಅವರಿಗಿಂತ 43 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಯಶಪಾಲ ಸುವರ್ಣ ತನ್ನ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದರಾಜ್ ಕಾಂಚನ್ ವಿರುದ್ಧ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರನ್ನು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ ಶೆಟ್ಟಿ ಅವರು ಸೋಲಿಸಿದ್ದಾರೆ. ಬೈಂದೂರು ಕ್ಷೇತ್ರದಲ್ಲಿ ಭಾಜಪಾ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರು ಅಂತರದಿಂದ ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ನ ಗೋಪಾಲ ಪೂಜಾರಿಯವರನ್ನು ಸೋಲಿಸಿದರು. ಇನ್ನು ಕಾರ್ಕಳದಲ್ಲಿ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರನ್ನು 4602 ಮತಗಳ ಅಂತರದಿಂದ ಸೋಲಿಸಿದರು.
ಕಾರ್ಯಕರ್ತರು, ಅಭಿಮಾನಿಗಳ ಸಂಭ್ರಮ:
ಮತ ಎಣಿಕೆ ಕೇಂದ್ರದಲ್ಲಿ ಒಂದೊಂದು ಸುತ್ತಿನ ಮತ ಎಣಿಕೆ ನಡೆದು ಮೈಕ್ ಮೂಲಕ ಘೋಷಿಸುತ್ತಿದ್ದಂತೆ ಎಣಿಕಾ ಕೇಂದ್ರದ ಆಸುಪಾಸಿನಲ್ಲಿ ನಿಂತ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ವಿಜಯಿಯಾದ ಅಭ್ಯರ್ಥಿಗಳನ್ನು ಎತ್ತಿಕೊಂಡು, ಹೂಹಾರ ಹಾಕಿ, ಘೋಷಣೆ ಕೂಗಿ ವಿಜಯವನ್ನು ಸಂಭ್ರಮಿಸಿದರು.
Comments are closed.