ಕರ್ನಾಟಕ

ಸಿಎಂ ಆಗಿ ಸಿದ್ದರಾಮಯ್ಯ ಹೆಸರು ಬಹುತೇಕ ಅಂತಿಮ: ನಾಳೆಯೇ ಪ್ರಮಾಣವಚನ ಸಾಧ್ಯತೆ..!?

Pinterest LinkedIn Tumblr

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ 135 ವಿಧಾನಸಭೆ ಸೀಟು ಗೆದ್ದಿದ್ದು ಈ ಮಧ್ಯೆ ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗ ಹಾಗೂ ಕಠೀರವ ಸ್ಟೇಡಿಯಂನಲ್ಲಿ ಆಯೋಜಿಸಲು ಚಿಂತನೆಗಳು ನಡೆದಿವೆ ಎನ್ನಲಾಗಿದೆ.

ಹಲವು ವರ್ಷಗಳ ಬಳಿಕ ಕಾಂಗ್ರೆಸ್​ಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸೀಟು ಬಂದಿವೆ. ಹೀಗಾಗಿ ಸಿಎಂ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ತಯಾರಿ ನಡೆಸಿದೆ. ಹೀಗಾಗಿ ವಿಧಾನಸೌಧ ಮುಂಭಾಗ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಲು ಚಿಂತನೆಗಳು ನಡೆದಿವೆ.

ನಾಳೆ(ಮೇ 18) ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆದಿದ್ದು ಅಕಸ್ಮಾತ್ ಅಸಾಧ್ಯವಾದರೆ ಮೇ.20 ಶನಿವಾರ ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ನಡೆದಿದೆ. ಬಹುತೇಕ ನಾಳೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳು ಹೆಚ್ಚಿವೆ.

ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸಾಧ್ಯತೆ
ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಅವರ ಜೊತೆಗಿನ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಇನ್ನು ಅಧಿಕೃತವಾಗಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಣೆಯಾದರೆ ಅವರ ನಿವಾಸದ ಬಳಿ ಅಭಿಮಾನಿಗಳು ಬರುವ ಮುನ್ಸೂಚನೆ ಹಿನ್ನಲೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಶಿವಾನಂದ ಸರ್ಕಲ್ ಸಮೀಪ ಇರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದ ಬಳಿ ಒಂದು ಕೆಎಸ್ಆರ್ ಪಿ ವ್ಯಾನ್, 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಇನ್ನು ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಜೊತೆ ಎರಡು ಪ್ರಮುಖ ಖಾತೆಗಳನ್ನು ನೀಡಲಾಗುತ್ತದೆ. ಇನ್ನು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎನ್ನಲಾಗಿದೆ.

Comments are closed.