ಕರ್ನಾಟಕ

‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’: ಸಿದ್ದರಾಮಯ್ಯ | ‘ಕನ್ನಡಿಗರ ಶ್ರೇಯೋಭಿವೃದ್ಧಿಗೆ ಪ್ರಮುಖ ಆದ್ಯತೆ’:ಡಿಕೆಶಿ

Pinterest LinkedIn Tumblr

ನವದೆಹಲಿ: “ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ” ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ” ಎಂದು ಅವರು ಟ್ವೀಟ್ ಮಾಡಿದ್ರು.

ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಡಿಸಿಎಂ ಆಗಿ ಕಾಂಗ್ರೆಸ್​ ಹೈಕಮಾಂಡ್​ ಅಂತಿಮಗೊಳಿಸಿದೆ. ಇದರ ಬೆನ್ನಲ್ಲೇ ಮುನಿಸಿಕೊಂಡಿದ್ದ ಇಬ್ಬರು ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ದೆಹಲಿಯ ನಿವಾಸದಲ್ಲಿ ಒಗ್ಗಟ್ಟು ಪ್ರದರ್ಶಿಸಿದರು. ಖರ್ಗೆಯವರು ಇಬ್ಬರು ನಾಯಕರ ಕೈ ಮೇಲಕ್ಕೆತ್ತಿ ನಾವೆಲ್ಲಾ ಒಂದಾಗಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.

“ಕರ್ನಾಟಕದ ಸುರಕ್ಷಿತ ಭವಿಷ್ಯ ಮತ್ತು ಕನ್ನಡಿಗರ ಶ್ರೇಯೋಭಿವೃದ್ಧಿ ನಮ್ಮ ಪ್ರಮುಖ ಆದ್ಯತೆ. ಅದನ್ನು ಖಾತರಿಪಡಿಸುವಲ್ಲಿ ನಾವು ಒಗ್ಗಟ್ಟಾಗಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Comments are closed.