ಕರ್ನಾಟಕ

ನಿಯೋಜಿತ ಸಿಎಂ ಸಿದ್ದರಾಮಯ್ಯ,ಡಿಸಿಎಂ ಶಿವಕುಮಾರ್ ಇಂದು ದೆಹಲಿಗೆ: ಸಚಿವ ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ

Pinterest LinkedIn Tumblr

ಬೆಂಗಳೂರು: ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ನಾಳೆ ಮೇ 20ರಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುರುವಾರ ರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು. ಈಗಾಗಾಲೇ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ಲಾಬಿ ನಡೆಸುತ್ತಿದ್ದಾರೆ. ಅವರ ಪರವಾಗಿ ಸಮುದಾಯದ ಮುಖಂಡರು, ಮಠಾಧೀಶರು ಕೂಡ ಬೇಡಿಕೆಯಿಡುತ್ತಿದ್ದಾರೆ. ಸಚಿವ ಸಂಪುಟ ರಚನೆ ಬಗ್ಗೆ ಇಂದು ಪಟ್ಟಿ ಅಂತಿಮವಾಗುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ಇಂದು ದೆಹಲಿಗೆ: ಮೊದಲ ಹಂತದಲ್ಲಿ 10ರಿಂದ 15 ಅಥವಾ 20 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದಲ್ಲಿ ಸಚಿವ ಸ್ಥಾನ ಭರ್ತಿಗೆ ಚಿಂತನೆ ನಡೆಸಲಾಗಿದೆ. ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ, ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡುವ ಸದಸ್ಯರ ಹೆಸರುಗಳ ಪಟ್ಟಿಯನ್ನು ಹಿಡಿದುಕೊಂಡು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ಇಂದು ಬೆಳಗ್ಗೆಯೇ ಹೋಗುತ್ತಿದ್ದಾರೆ. ಅವರ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್ ಸಹ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.