ಕರ್ನಾಟಕ

ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ: 8 ಮಂದಿ ಸಚಿವರಿಗೆ ಪ್ರತಿಜ್ಞಾವಿಧಿ

Pinterest LinkedIn Tumblr

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸಹಿತ 8 ಮಂದಿ ಸಂಪುಟದ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನು ಇದೇ ಸಂರ್ಭದಲ್ಲಿ ಡಾ.ಪರಮೇಶ್ವರ್​ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೆ.ಎಚ್. ಮುನಿಯಪ್ಪ, ಕೆ.ಜೆ ಜಾರ್ಜ್ ಮತ್ತು ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹಮ್ಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಿದರು.

 

Comments are closed.