ಕರ್ನಾಟಕ

‘ಅಮೃತವರ್ಷಿಣಿ’ ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ವಿಧಿವಿಶ

Pinterest LinkedIn Tumblr

ಹೈದರಬಾದ್: ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು (73) ಅನಾರೋಗ್ಯದಿಂದ ಸೋಮವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್‌ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹಲವು ದಿನಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಶರತ್ ಬಾಬು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮೇ.22 ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಶರತ್ ಬಾಬು ಅವರು ನಿಧನರಾಗಿದ್ದಾರೆ. ಶರತ್ ಬಾಬು ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿರುವ ಶರತ್ ಬಾಬು 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳು ಸಿನಿಮಾರಂಗದ ನಟ ಶರತ್ ಬಾಬು ನಾಯಕನಾಗಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರಜನೀಕಾಂತ್​ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.

ರಜನಿಕಾಂತ್ ಜತೆ ಮುಳ್ಳುಮ್ ಮಲರುಂ, ತ್ಲೆಕ್ಕರನ್, ಅಣ್ಣಾಮಲೈ ಮತ್ತು ಮುತ್ತು ಚಿತ್ರಗಳ ಮೂಲಕ ಅಭಿಮಾನಿಗಳನ್ನು ಆಕರ್ಷಿಸಿದ್ದರು. 1973 ರಲ್ಲಿ ತೆಲುಗು ಚಲನಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು ಮತ್ತು ನಂತರ ಕೆ. ಬಾಲಚಂದರ್ ನಿರ್ದೇಶನದ ತಮಿಳು ಚಲನಚಿತ್ರ ನಿಝಲ್ ನಿಜಮಗಿರದು ಮೂಲಕ ಜನಪ್ರಿಯರಾದರು.

 

Comments are closed.