ಕರ್ನಾಟಕ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ‘ಬೆಂಗಳೂರು ಇತಿಹಾಸ’ ಪುಸ್ತಕ ನೀಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

Pinterest LinkedIn Tumblr

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ “ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರ ಆಶೀರ್ವಾದ ಪಡೆದೆ. ಇದೇ ವೇಳೆ ಅವರು ಬ.ನ. ಸುಂದರ ರಾವ್ ಅವರು ಬರೆದಿರುವ ಬೆಂಗಳೂರು ಇತಿಹಾಸ ಎನ್ನುವ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು” ಎಂದು ಬರೆದುಕೊಂಡಿದ್ದಾರೆ.

Comments are closed.