ಕರ್ನಾಟಕ

ಹಿಂದಿದ್ದ ಬಿಜೆಪಿ ಸರ್ಕಾರದ ಎಲ್ಲ ಯೋಜನೆಗಳ ಕಾಮಗಾರಿ ನಿಲ್ಲಿಸಲು ರಾಜ್ಯ ಸರ್ಕಾರ ಆದೇಶ

Pinterest LinkedIn Tumblr

ಬೆಂಗಳೂರು: ಎಲ್ಲಾ ಅಭಿವೃದ್ಧಿ ಯೋಜನೆಗಳ ಕೆಲಸವನ್ನು ನಿಲ್ಲಿಸಲು ಮತ್ತು ಕಾರ್ಯಗತಗೊಳಿಸಿದ ಕಾಮಗಾರಿಗೆ ಹಣ/ಪಾವತಿಗಳನ್ನು ತಡೆಹಿಡಿಯುವಂತೆ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಎಲ್ಲ ಯೋಜನೆ ಹಾಗೂ ಯೋಜನೆಗಳ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಈ ಕುರಿತು ಎಲ್ಲಾ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳ ಕಾರ್ಯದರ್ಶಿಗಳು, ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳಿಗೆ ಹಣಕಾಸು ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಬಿಜೆಪಿ ಸರ್ಕಾರ ಅನುಮೋದಿಸಿದ ಹೊಸ ಯೋಜನೆಗಳನ್ನು ಜಾರಿಗೊಳಿಸದಂತೆ ಸೂಚನೆ ನೀಡಲಾಗಿದೆ. ಹಿಂದಿನ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

Comments are closed.