ಕರ್ನಾಟಕ

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

Pinterest LinkedIn Tumblr

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಹಿಂದಿನ ಮುಖ್ಯಮಂತ್ರಿಗಳ ನಿವಾಸಿಗಳಿಗೆ ತೆರಳಿ ಆಶೀರ್ವಾದ ಪಡೆದರು.

ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಮ್ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ, ಹೂಗುಚ್ಛ ನೀಡಿ ಶಾಲು ಹೊದಿಸಿ ಗೌರವಿಸಿದರು. ಜೊತೆಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇದ್ದರು.

ಕಾಂಗ್ರೆಸ್ ಪಕ್ಷದ ನಾವು ನುಡಿದಂತೆ ನಡೆಯುತ್ತೇವೆ. ನಾನು ಸದಾ ಸಕಾರಾತ್ಮಕವಾಗಿ ಆಲೋಚಿಸುತ್ತೇನೆಯೇ ಹೊರತು ಋಣಾತ್ಮಕವಾಗಿ ಆಲೋಚನೆ ಮಾಡುವುದಿಲ್ಲ. ನಾನು ಇಂದು ಎಸ್.ಎಂ. ಕೃಷ್ಣ, ವೀರಪ್ಪ ಮೊಯ್ಲಿ ಅವರನ್ನು ಭೇಟಿ ಮಾಡಿ ನಂತರ ದೇವೇಗೌಡರನ್ನು ಭೇಟಿ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Comments are closed.