ಕರ್ನಾಟಕ

ಪರಪ್ಪನ ಅಗ್ರಹಾರ ಸೇರಿ ರಾಜ್ಯಾದ್ಯಂತ ಜೈಲುಗಳಲ್ಲಿದ್ದ 214 ಕೈದಿಗಳ ಬಿಡುಗಡೆ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.

(ಸಾಂದರ್ಭಿಕ ಚಿತ್ರ)

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿ ಒಟ್ಟು 81 ಮಂದಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬಿಜೆಪಿ ಸರಕಾರದ ಕ್ಯಾಬಿನೆಟ್‌ ಸಭೆಯಲ್ಲಿ ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿತ್ತು. ಬಳಿಕ ರಾಜ್ಯಪಾಲರು ಈಗ ಒಪ್ಪಿಗೆ ನೀಡಿದ್ದು, ಬಿಡುಗಡೆಗೆ ಸೂಚಿಸಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಪರಪ್ಪನ ಅಗ್ರಹಾರಕ್ಕೆ ಕರೆತರಲಾಗಿದ್ದ ಮೈಸೂರು ಹಾಗೂ ವಿಜಯಪುರ ಜಿಲ್ಲೆಯ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.

Comments are closed.