ಪ್ರಮುಖ ವರದಿಗಳು

60ನೇ ವಯಸ್ಸಲ್ಲಿ 2ನೇ ಮದುವೆಯಾದ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ

Pinterest LinkedIn Tumblr

ಪಶ್ಚಿಮಬಂಗಾಳ: ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ತಮ್ಮ 60ನೇ ವಯಸ್ಸಿನಲ್ಲಿ ಎರಡನೇ ಮದುವೆಯಾಗಿದ್ದಾರೆ. ಬಹಳಷ್ಟು ಚಿತ್ರಗಳಲ್ಲಿ ಖಳನಟನ ಪಾತ್ರದಲ್ಲಿ ಕಾಣಿಸಿಕೊಂಡ ಅವರು ಅಸ್ಸಾಂ ಮೂಲದ ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಎನ್ನುವರನ್ನು ವಿವಾಹವಾಗಿದ್ದಾರೆ.

ಆಪ್ತರು, ಗುರುಹಿರಿಯರ ಸಮ್ಮುಖದಲ್ಲಿ ಸರಳವಾಗಿ ನಟ ಆಶಿಶ್ ಮದುವೆಯಾಗಿದ್ದಾರೆ. ನಮ್ಮ ಮದುವೆ ಸಿಂಪಲ್ ಆಗಿ ನಡೆಯಬೇಕೆಂದು ಆಸೆ ಇತ್ತು ಅದೇ ರೀತಿ ಆಯಿತು. ಖುಷಿಯಿದೆ. ಸದ್ಯದಲ್ಲೇ ನಮ್ಮಿಬ್ಬರ ಭೇಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದು ಆಶಿಶ್ ಮಾತನಾಡಿದ್ದಾರೆ.

1986ರಲ್ಲಿ ನಟನಾ ಲೋಕಕ್ಕೆ ಕಾಲಿಟ್ಟ‌ ಆಶಿಶ್ ಅವರು ಹಿಂದಿ, ತೆಲುಗು, ತಮಿಳು, ಕನ್ನಡ, ಮಲಯಾಳಂ, ಇಂಗ್ಲಿಷ್, ಒಡಿಯಾ, ಮರಾಠಿ ಮತ್ತು ಬೆಂಗಾಲಿ ಸೇರಿದಂತೆ ಸುಮಾರು 11 ಭಾಷೆಯಲ್ಲಿ 300 ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದಾರೆ.

1995ರಲ್ಲಿ ಬಂದ ʼ ದ್ರೋಹ್ಕಾಲ್ʼ ಸಿನಿಮಾದಲ್ಲಿನ ಅವರ ಪೋಷಕ ನಟನೆಗಾಗಿ ಆಶಿಶ್‌ ಅವರಿಗೆ ನ್ಯಾಷನಲ್‌ ಅವಾರ್ಡ್‌ ಕೂಡ ಸಿಕ್ಕಿತ್ತು.

 

Comments are closed.