ಕರ್ನಾಟಕ

ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆ ‘ಸಿದ್ಧ’; 24 ನೂತನ ಸಚಿವರ ಪಟ್ಟಿ ಫೈನಲ್‌- ಇಂದು ಪ್ರಮಾಣವಚನ

Pinterest LinkedIn Tumblr

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಶನಿವಾರ ಬೆಳಗ್ಗೆ ವಿಸ್ತರಣೆಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ್ ಪ್ರಮಾಣವಚನ ಸ್ವೀಕರಿಸಲಿರುವ 24 ನೂತನ ಸಚಿವ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಸಿದ್ದರಾಮಯ್ಯ ಅವರು ಹೈಕಮಾಂಡ್​ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಂದು (ಶನಿವಾರ) ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 24 ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಕ್ಷೇತ್ರದ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರನ್ನು ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಮಾಡಲಾಗಿದೆ.

ನೂತನ ಸಚಿವರ ಪಟ್ಟಿ:
ಎಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ ವೆಂಕಟೇಶ್, ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ ದರ್ಶನಾಪುರ, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ,, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ಪಾಟೀಲ್, ಮಂಕಾಳು ವೈದ್ಯ, ಲಕ್ಷ್ಮೀ ಹೆಬ್ಬಾಳ್ಕರ್​, ರಹೀಂ ಖಾನ್, ಡಿ.ಸುಧಾಕರ್, ಸಂತೋಷ್ ಲಾಡ್​, ಬೋಸರಾಜು, ಬಿ.ಎಸ್.ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ

Comments are closed.