ಕರ್ನಾಟಕ

ಚಾಮರಾಜನಗರದಲ್ಲಿ ಲಘು ವಿಮಾನ ಪತನ; ಹೊತ್ತಿ ಉರಿದ ಜೆಟ್‌: ಇಬ್ಬರು ಪೈಲಟ್‌ಗಳು ಪಾರು

Pinterest LinkedIn Tumblr

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ಲಘು ವಿಮಾನ ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು (ಜೂ.1 ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲಘು ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

 

Comments are closed.