ಕರಾವಳಿ

ಪಿಯು ತರಗತಿಗಳು ಆರಂಭವಾಗಿದ್ದರೂ ಬಗೆಹರಿಯದ ಹಾಸ್ಟೆಲ್ ಸಮಸ್ಯೆ: ಕುಂದಾಪುರ ಶಾಸಕರಿಗೆ ಎಬಿವಿಪಿ ಮನವಿ

Pinterest LinkedIn Tumblr

ಕುಂದಾಪುರ: ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಹಾಸ್ಟೆಲಿಗೆ ಅಪ್ಲಿಕೇಶನ್ ಇನ್ನೂ ನೀಡಲಿಲ್ಲ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ದೂರದೂರುಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಬೇಕೆಂಬ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರದ ವತಿಯಿಂದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದರು.

ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಪ್ರಾರಂಭವಾಗಿದ್ದು, ದೂರದ ಹಾಗೂ ಬೇರೆ ಬೇರೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ ಕುಂದಾಪುರಕ್ಕೆ ಬರುವ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯವನ್ನು ನಂಬಿಕೊಂಡಿದ್ದಾರೆ. ಕಾಲೇಜು ಪ್ರಾರಂಭವಾಗಿದರೂ ಕೂಡ ಇನ್ನೂ ವಿದ್ಯಾರ್ಥಿ ನಿಲಯದಿಂದ ಅಪ್ಲಿಕೇಶನ್ ನೀಡಿಲ್ಲ. ಇದರಿಂದ ಬೇರೆ ಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ವಸತಿಗಾಗಿ ದೊಡ್ಡ ಮಟ್ಟದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹಾಗೂ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದರು ಕೂಡ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ ವಿಳಂಭವಾಗುತ್ತಿದೆ. ಹಾಸ್ಟೆಲ್ ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಹಾಸ್ಟೆಲ್ ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಅವಕಾಶ ಕಲ್ಪಿಸಬೇಕು. ವಿದ್ಯಾರ್ಥಿ ನಿಲಯಕ್ಕೆ ಬರುವ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಎಬಿವಿಪಿ ತಾಲೂಕು ಸಂಚಾಲಕ ಧನುಷ್ ಪೂಜಾರಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ವಿಘ್ನೇಶ್ ಶೆಟ್ಟಿ, ಪ್ರಮುಖರಾದ ಚೇತನ್, ಚಂದನ್, ಅಪೂರ್ವ,ನೇಹಾ, ಪ್ರಜ್ಞಾ, ಭೂಮಿಕಾ ಸಹಿತ ವಿವಿಧ ಕಾಲೇಜಿನ ಅಭಾವಿಪ ವಿದ್ಯಾರ್ಥಿ ಪ್ರತಿನಿಧಿಗಳು ಇದ್ದರು.

Comments are closed.