ಕರಾವಳಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿ ಜಿಲ್ಲೆಗಳಲ್ಲಿ ‘ಅಲರ್ಟ್’ ಇರಲು ಹವಾಮಾನ ಇಲಾಖೆ ಮುನ್ಸೂಚನೆ

Pinterest LinkedIn Tumblr

ಮಂಗಳೂರು/ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆ ಬರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ‌ ದ.ಕ ಹಾಗೂ ಉಡುಪಿ ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ‌ ಅಗತ್ಯ ಮುನ್ಸೂಚನೆಗಳನ್ನು ನೀಡಿದೆ.

ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು/ ಪ್ರವಾಸಿಗರು ಸಮುದ್ರ/ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬಗಳು, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ಸೇರಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

 

Comments are closed.