ಕರಾವಳಿ

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕುಂದಾಪುರ ನ್ಯಾಯಾಲಯ

Pinterest LinkedIn Tumblr

ಕುಂದಾಪುರ: ಶುಕ್ರವಾರ ಬೆಳಿಗ್ಗೆ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಹಿಂದಿನಿಂದ  ಬಂದ ಕಿಡಿಗೇಡಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ಕುಂದಾಪುರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಅರೊಪಿ ನಜೀರ್ (35) ಎನ್ನುವಾತನಿಗೆ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ.

ಘಟನೆ ವಿವರ: ವಿದ್ಯಾರ್ಥಿನಿಯೋರ್ವಳು ಬೀಜಾಡಿ-ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆರೋಪಿ ನಜೀರ್ ಆಕೆಗೆ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದ. ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದು ಸ್ಥಳೀಯರು ಆರೋಪಿಯನ್ನು ಹಿಡಿದು ವಿಚಾರಿಸಿದಾಗ ವಿದ್ಯಾರ್ಥಿನಿ‌ ನಡೆದ ಘಟನೆ ವಿವರಿಸಿದ್ದಳು. ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದರು.

ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿದ್ಯಾರ್ಥಿನಿಯಿಂದ ದೂರು ದಾಖಲು ಮಾಡಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿರಿ:

ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದಾಗ ಯುವಕನಿಂದ ಅಸಭ್ಯ ವರ್ತನೆ; ಹಾಸ್ಟೆಲ್ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು..!

Comments are closed.