ಕರಾವಳಿ

ಹೆಬ್ರಿ: ಬಸ್ಸು-ಕಾರು ಭೀಕರ ಅಪಘಾತ; ಉಡುಪಿ ಮೂಲದ ಶಿಕ್ಷಕರು ದಾರುಣ ಮೃತ್ಯು, ಇನ್ನೋರ್ವರು ಗಂಭೀರ

Pinterest LinkedIn Tumblr

ಉಡುಪಿ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೀತಾನದಿ ಜಕ್ಕನಮಕ್ಕಿ ಬಳಿ ಜೂ.11 ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಉಡುಪಿ ಡಿಡಿಪಿಐ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮಶೇಖರ ಮೃತಪಟ್ಟವರು.

ಉಡುಪಿ ಕಡೆಯಿಂದ ಆಗುಂಬೆಯತ್ತ ಸಾಗುತ್ತಿದ್ದ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಆಗಮಿಸುತ್ತಿದ್ದ ಶಿಕ್ಷಕರಿರುವ ಕಾರಿನ ನಡುವೆ ಅಪಘಾತ ನಡೆದಿದೆ.

ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Comments are closed.