ಕರಾವಳಿ

ತ್ರಾಸಿ: ಬಸ್ಸು ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಾಚಾರಿ ಮೃತ್ಯು

Pinterest LinkedIn Tumblr

ಕುಂದಾಪುರ: ರಸ್ತೆ ದಾಟಲು ನಿಂತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಡಿಕ್ಕಿಹೊಡೆದ ಪರಿಣಾಮ ಪಾದಾಚಾರಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ರಾತ್ರಿ‌ ನಡೆದಿದೆ.

ಸಾಸ್ತಾನ ಮೂಲದ ರಾಜು ಪೂಜಾರಿ ಎನ್ನುವರು ಮೃತ ವ್ಯಕ್ತಿ. ಜೂ.11 ರಾತ್ರಿ ವೇಳೆ ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆಯ ಡಿವೈಡರ್‌ ಬಳಿ ರಸ್ತೆಯ ಅಂಚಿನಲ್ಲಿ ರಾಜು ಪೂಜಾರಿಯವರು ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಬಸ್‌ನ್ನು ಅದರ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದು ರಸ್ತೆ ದಾಟಲು ನಿಂತಿದ್ದ ರಾಜು ಪೂಜಾರಿಯವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ತಲೆಯ ಹಿಂಭಾಗಕ್ಕೆ ಗಂಭೀರ ಏಟಾಗಿದ್ದು, ಎರಡು ಕಾಲಿಗೆ ಮೂಳೆ ಮುರಿದು ವೀಪರಿತ ರಕ್ತಸ್ರಾವವಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಕಾರದಲ್ಲಿ ಗಂಗೊಳ್ಳಿ 24*7 ಆಪತ್ಪಾಂಧವ ಅಂಬ್ಯುಲೆನ್ಸ್‌ನಲ್ಲಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.