ಕರಾವಳಿ

ಯಕ್ಷಗಾನ ಗುರು, ಭಾಗವತ ತೋನ್ಸೆ ಜಯಂತ ಕುಮಾರ್ ಇನ್ನಿಲ್ಲ

Pinterest LinkedIn Tumblr

ಉಡುಪಿ: ಯಕ್ಷಶಿಕ್ಷಣದ ಗುರು, ಭಾಗವತ, ವೇಷಧಾರಿ ತೋನ್ಸೆ ಜಯಂತ್‌ ಕುಮಾರ್‌ (77) ಅವರು ಸೋಮವಾರ ಮುಂಜಾನೆ ನಿಧನರಾದರು.

1946ರಲ್ಲಿ ತೋನ್ಸೆಯವರು ಚೇತನ ಪ್ರೌಢಶಾಲೆ, ಹಂಗಾರಕಟ್ಟೆಯಲ್ಲಿ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದರು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು. ಆರಂಭದಲ್ಲಿ ಯಕ್ಷಗಾನ ವೇಷಧಾರಿಯಾಗಿ ಆಮೇಲೆ ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಉಡುಪಿ ಶಾಸಕರ ನೇತೃತ್ವದ ಯಕ್ಷಶಿಕ್ಷಣ ಟಸ್ಟ್ ನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾಗಿದ್ದರು.

ಅವರು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ.

 

Comments are closed.