ಕರಾವಳಿ

ಉಡುಪಿಯ ಸಂತೆಕಟ್ಟೆ ಓವರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವೀಸ್ ರಸ್ತೆ ಕುಸಿತ

Pinterest LinkedIn Tumblr

ಉಡುಪಿ: ಉಡುಪಿಯ ಸಂತೆಕಟ್ಟೆ ಬಳಿ ಕಾಮಗಾರಿ ಹಂತದಲ್ಲಿರುವ ಓವರ್ ಪಾಸ್ ಕಾಮಗಾರಿಯ ಬೃಹತ್ ಹೊಂಡ ಕುಸಿಯತೊಡಗಿದೆ.

ಹೊಂಡದ ಒಂದು ಭಾಗ ಭಾರೀ ಮಳೆಗೆ ಕುಸಿಯತೊಡಗಿದ್ದು ಸ್ಥಳೀಯರಲ್ಲಿ ಭೀತಿ ಎದುರಾಗಿದೆ. ಮಳೆಗಾಲಕ್ಕೂ ಮುನ್ನ ಓವರ್ ಪಾಸ್ ಕಾಮಗಾರಿ ಪ್ರಾರಂಭಿಸಲಾಗಿತ್ತು. ಅದಕ್ಕಾಗಿ ಬೃಹತ್ ಹೊಂಡ ತೋಡಲಾಗಿತ್ತು. ಹೊಂಡದಲ್ಲಿ ಭಾರೀ ಪ್ರಮಾಣದ ಬಂಡೆ ಕಲ್ಲು ಕಂಡುಬಂದ ಕಾರಣ ಕಾಮಗಾರಿ ಬಹುತೇಕ ನಿಧಾನಗೊಂಡಿತ್ತು.

ಬಳಿಕ ಭಾರೀ ಮಳೆಗೆ ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಆದರೆ ಇಂದು ಕಾಮಗಾರಿ ಸ್ಥಳದಲ್ಲಿ ಕುಸಿಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

Comments are closed.