ಕರ್ನಾಟಕ

ಜೈನ ಮುನಿಗಳ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್‌

Pinterest LinkedIn Tumblr

ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮವಹಿಸಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕೀಯ, ತಾರತಮ್ಯ ಮಾಡುವುದಿಲ್ಲ. ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.

ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯಿದೆ. ಇದು ಸ್ವಾಭಾವಿಕ ಪದ್ದತಿ, ಇದರಲ್ಲಿ ತಾರತಮ್ಯ ಪ್ರಶ್ನೆ ಇಲ್ಲ. ಘಟನೆ ಆದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ವರೂರಲ್ಲಿ ಜೈನ ಮುನಿಗಳು ಉಪವಾಸ ಕೂಳಿತಿದ್ದಾರೆ. ಅವರ ಬೇಡಿಕೆಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.

ನಮ್ಮ ಗೃಹ ಇಲಾಖೆ ಸಮರ್ಥವಾಗಿದೆ. ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ಶುರುವಾಗಿದೆ. ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯ ಇಲ್ಲ. ಗೃಹ ಇಲಾಖೆಯೇ ಸಮರ್ಥವಾಗಿದೆ. ನಮ್ಮ ಇಲಾಖೆಯ ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದರು.

 

Comments are closed.