ಬೆಂಗಳೂರು: ಬೆಂಗಳೂರು ನಗರದಲ್ಲಿ ಮಂಗಳವಾರ ಬೆಳಗ್ಗೆ ಪೊಲೀಸರ ಗುಂಡಿನ ಸದ್ದು ಕೇಳಿಸಿದೆ. ಸದಾಶಿವನಗರದ ಅರಮನೆ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಕೋರ ಯಾಸರ್ ರೆಹಮಾನ್ ಅಲಿಯಾಸ್ ಘೋರ್ (21) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಯಾಸರ್ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಇಂದು (ಜೂ.11) ಬೆಳಗ್ಗೆ ಕಾರ್ಯಾಚರಣೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಷಾದ್ರಿಪುರಂ ಇನ್ಸ್‌ಪೆಕ್ಟರ್ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.