ಪ್ರಮುಖ ವರದಿಗಳು

ಇಸ್ರೋದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿ: ನಿಗದಿತ ಕಕ್ಷೆ ಸೇರಿದ ನೌಕೆ

Pinterest LinkedIn Tumblr

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದ್ದು ಹೆಮ್ಮೆಯ ಸಂಗತಿಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸಕ್ಕೆ ಹಾರಿದೆ.

ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಕಾರ್ಯಾಚರಣೆಗೆ ಅಧಿಕೃತ ಚಾಲನೆ ಸಿಕ್ಕಿದಂತಾಗಿದೆ.

ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ. ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರು ಸಾಥ್ ನೀಡಿದ್ದಾರೆ.

Comments are closed.